ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಸಿಯೂಟ ಸೇವಿಸಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಚಳ್ಳಕೆರೆ: ತಾಲೂಕಿನ ದೇವರಮರಿಕುಂಟೆ ಗ್ರಾಮದ ಖಾಸಗಿ ವಾಲ್ಮೀಕಿ ಪ್ರೌಢಶಾಲೆಯಲ್ಲಿ ಅನ್ನ ಮತ್ತು ಬಜ್ಜಿ ಸೇವಿಸಿದ ಬಳಿಕ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಎರಡು ಆಂಬುಲೆನ್ಸ್‌ಗಳ ಮೂಲಕ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಬೈಕ್ ಹಾಗೂ ಇತರೆ ವಾಹನಗಳಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಆಸ್ಪತ್ರೆಗೆ ಧಾವಿಸಿ ಆತಂಕ ವ್ಯಕ್ತಪಡಿಸಿದರು.

ವಾಲ್ಮೀಕಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟವಾದ ಅನ್ನ ಮತ್ತು ಬಜ್ಜಿ ಸೇವಿಸಿದ ಬಳಿಕ ವಾಂತಿ, ಹೊಟ್ಟೆನೋವು ಸೇರಿದಂತೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದ್ದು, ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Edited By :
PublicNext

PublicNext

05/08/2026 09:53 pm

Cinque Terre

2.6 K

Cinque Terre

0

ಸಂಬಂಧಿತ ಸುದ್ದಿ