ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ತಂತಿ ಸ್ಪರ್ಶಿಸಿ 3 ಕುರಿಗಳ ಸಾವು

ರಾಣೆಬೆನ್ನೂರು : ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ತಂತಿ ಸ್ಪರ್ಶಿಸಿ ಮೂರು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೆರಡು ಕುರಿಗಳು ಅಸ್ವಸ್ಥಗೊಂಡಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹುಲ್ಲತ್ತಿ ಕ್ರಾಸ್ ಸಮೀಪ ನಡೆದಿದೆ.

ಗುಡ್ಡದ ಅನ್ವೇರಿ ನಿವಾಸಿ ಬೀರಪ್ಪ ಬಸಪ್ಪ ಕುದ್ರಿಹಾಳ ಅವರಿಗೆ ಸೇರಿದ ಕುರಿಗಳು ಮೇಯುತ್ತಿದ್ದ ವೇಳೆ ಟ್ರಾನ್ಸ್‌ಫಾರ್ಮರ್ ಸಮೀಪ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಶುವೈದ್ಯಾಧಿಕಾರಿಗಳು ಮತ್ತು ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯಲ್ಲಿ ಕುರಿ ಸಾಕಾಣಿಕೆದಾರರಿಗೆ ಗಣನೀಯ ನಷ್ಟ ಉಂಟಾಗಿದ್ದು, ವಿದ್ಯುತ್ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

-ಲೋಕೇಶ್ ಸುಣಗಾರ್, ಪಬ್ಲಿಕ್ ನೆಕ್ಸ್ಟ್ ಹಾನಗಲ್

Edited By : Vinayak Patil
PublicNext

PublicNext

05/08/2026 10:27 pm

Cinque Terre

2.21 K

Cinque Terre

0

ಸಂಬಂಧಿತ ಸುದ್ದಿ