ಹಾವೇರಿ: ರಾಜ್ಯ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕದ ಕುರುಬ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದನ್ನು ಖಂಡಿಸಿ ಆಗಸ್ಟ್ 6ರಂದು ಹಾವೇರಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹಾವೇರಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ನಾಗರಾಜ ಆನ್ವೇರಿ ತಿಳಿಸಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಕುರುಬ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ, ಅವರಿಗೆ ಸ್ಥಾನ ನೀಡದಿರುವುದು ಉತ್ತರ ಕರ್ನಾಟಕದ ಕುರುಬ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.
ಉತ್ತರ ಕರ್ನಾಟಕದ ಕುರುಬ ಸಮುದಾಯದ ಭಾವನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿ, ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಚಿವ ಸ್ಥಾನ ನೀಡದಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಆಗಸ್ಟ್ 6ರಂದು ಹಾವೇರಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಕುರುಬ ಸಮುದಾಯದ ಮುಖಂಡರು, ಯುವಕರು, ಶಾಸಕ ಬಸವರಾಜ ಶಿವಣ್ಣ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ನಾಗರಾಜ ಆನ್ವೇರಿ ಮನವಿ ಮಾಡಿದ್ದಾರೆ.
PublicNext
05/08/2026 10:29 pm
LOADING...