ಕುಶಾಲನಗರ : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಆಯ್ಕೆ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಸಚಿವ ಪಿ.ಎಂ. ನರೇಂದ್ರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಮಾತನಾಡಿದ ನರೇಂದ್ರ ಸ್ವಾಮಿ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತ ಇರುವುದರಿಂದ ಜನಾಭಿಪ್ರಾಯದ ಆಧಾರದ ಮೇಲೆ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಸಭಾಪತಿ ಆಯ್ಕೆ ಸೇರಿದಂತೆ ಈ ಎಲ್ಲ ವಿಚಾರಗಳು ಪಕ್ಷದ ಆಂತರಿಕ ವಿಷಯಗಳಾಗಿದ್ದು, ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದರು. ಈ ಸಂಬಂಧ ಅಂತಿಮ ನಿರ್ಧಾರವನ್ನು ಪಕ್ಷವೇ ತೆಗೆದುಕೊಳ್ಳಲಿದ್ದು, ಸೂಕ್ತ ಸಂದರ್ಭದಲ್ಲಿ ವಿಧಾನ ಪರಿಷತ್‌ನಲ್ಲೇ ಈ ವಿಚಾರ ಪ್ರಸ್ತಾಪವಾಗಲಿದೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ, ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡುವುದಿಲ್ಲ ಎಂಬ ಹೇಳಿಕೆ ರಾಜಕೀಯವಾಗಿ ಗಮನ ಸೆಳೆದಿದ್ದರೂ, ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದನ್ನು ಸಚಿವ ನರೇಂದ್ರಸ್ವಾಮಿ ತಪ್ಪಿಸಿದರು. ಪಕ್ಷದ ನಿರ್ಧಾರವೇ ಅಂತಿಮ ಎಂಬ ಸಂದೇಶವನ್ನು ರವಾನಿಸಿದ್ರು.
PublicNext
05/08/2026 10:33 pm
LOADING...