ಎನ್.ಆರ್. ಪುರ : ಮದುವೆ ಮನೆಯ ಸಂಭ್ರಮ, ಮದರಂಗಿ ಶಾಸ್ತ್ರದ ಗಡಿಬಿಡಿಯನ್ನು ಬಂಡವಾಳ ಮಾಡಿಕೊಂಡ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿರುವ ಘಟನೆ ಮಾಗುಂಡಿ ಗ್ರಾಮದಲ್ಲಿ ವರದಿಯಾಗಿದೆ.
ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕಾಗಿ ಬಂದಿದ್ದ ಕುಟುಂಬವೊಂದು ತಮ್ಮ ಬಳಿಯಿದ್ದ ಒಡವೆಗಳ ಬ್ಯಾಗ್ ಅನ್ನು ಮನೆಯ ಕೊಠಡಿಯಲ್ಲಿ ಸುರಕ್ಷಿತವಾಗಿ ಇರಿಸಿತ್ತು. ಆದರೆ, ಮಧ್ಯರಾತ್ರಿ ಮದರಂಗಿ ಶಾಸ್ತ್ರದ ಸಂಭ್ರಮದಲ್ಲಿದ್ದ ಸಮಯವನ್ನು ಚಾಣಾಕ್ಷತನದಿಂದ ಬಳಸಿಕೊಂಡ ಕಳ್ಳರು, ಬ್ಯಾಗ್‌ನಲ್ಲಿದ್ದ 10 ಗ್ರಾಂ ತೂಕದ ತಾಳಿ ಸರ ಹಾಗೂ ವಿವಿಧ ತೂಕದ 7 ಚಿನ್ನದ ಉಂಗುರಗಳು ಸೇರಿದಂತೆ ಒಟ್ಟು 25 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ.
ಕಳುವಾದ ಆಭರಣಗಳ ಒಟ್ಟು ಅಂದಾಜು ಮೌಲ್ಯ ₹3.75 ಲಕ್ಷ ರೂಪಾಯಿಗಳು ಎಂದು ತಿಳಿದುಬಂದಿದೆ. ಈ ಕೃತ್ಯದ ಹಿನ್ನೆಲೆಯಲ್ಲಿ ಹತ್ತಿರದ ಸಂಬಂಧಿಕರ ಮೇಲೆಯೇ ಅನುಮಾನ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
PublicNext
05/08/2026 10:33 pm
LOADING...