ಕುಶಾಲನಗರ: ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟ ಹಾಗೂ ಪರಿಸ್ಥಿತಿಯನ್ನು ವೀಕ್ಷಿಸಿದ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಚಿವರ ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ್ದು, ಖಾತೆ ಹಂಚಿಕೆ ಸಂಪೂರ್ಣವಾಗಿ ಪಕ್ಷದ ತೀರ್ಮಾನವಾಗಿದ್ದು, ಅತೀ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದರು. ಯಾರಿಗೆ ಯಾವ ಖಾತೆ ಸಿಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ವಿಚಾರ ಪಕ್ಷದ ಆಂತರಿಕ ವಿಷಯವಾಗಿರುವುದರಿಂದ ಈಗ ಅದರ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಹೇಳಿದರು.
ಸಚಿವ ಸ್ಥಾನ ಹಂಚಿಕೆ ಹಿನ್ನೆಲೆಯಲ್ಲಿ ಕೆಲ ಶಾಸಕರ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದು ನಮ್ಮ ಮನೆಯ ವಿಚಾರ. ಮನೆಯ ಅಣ್ಣ-ತಮ್ಮಂದಿರ ನಡುವೆ ಹೇಗೆ ಭಿನ್ನಾಭಿಪ್ರಾಯಗಳು ಸಹಜವೋ, ಅದೇ ರೀತಿ ಪಕ್ಷದಲ್ಲೂ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಅವನ್ನೆಲ್ಲ ಪಕ್ಷದ ಹಿರಿಯ ನಾಯಕರು ಹಾಗೂ ಹೈಕಮಾಂಡ್ ಮಾತುಕತೆಯ ಮೂಲಕ ಶೀಘ್ರದಲ್ಲೇ ಬಗೆಹರಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕೊಡಗಿನ ಹಾರಂಗಿಯಲ್ಲಿ ಸಚಿವ ನರೇಂದ್ರ ಸ್ವಾಮಿ ತಿಳಿಸಿದರು.
PublicNext
05/08/2026 10:36 pm
LOADING...