ಉತ್ತರ ಪ್ರದೇಶ: ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿ, ಸಾರ್ವಜನಿಕವಾಗಿ ಮೆರವಣಿಗೆ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಹಿಂಬದಿಯಲ್ಲಿ ಬೈಕ್‌ನಲ್ಲಿ ಬಂದ ಆರೋಪಿ, ಅವರಲ್ಲಿ ಒಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದನು. ಈ ಇಡೀ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ಸಂತ್ರಸ್ತ ವಿದ್ಯಾರ್ಥಿನಿಯರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.
ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದ ಮೇಲೆ ತಕ್ಷಣವೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಿಸಿಟಿವಿ ಹಾಗೂ ವೈರಲ್ ವಿಡಿಯೋ ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧನದ ಬಳಿಕ ಆರೋಪಿಯನ್ನು ಆತ ಕೃತ್ಯ ಎಸಗಿದ ಪ್ರದೇಶದಲ್ಲೇ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಪೊಲೀಸರು, ಕಾಮುಕನಿಗೆ ಲಾಠಿ ರುಚಿ ತೋರಿಸುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ.
PublicNext
05/08/2026 10:48 pm
LOADING...