ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ಕಡೂರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ !

ಹಾವೇರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ರಾಣೇಬೆನ್ನೂರು–01 ಯೋಜನಾ ಕಚೇರಿ ವತಿಯಿಂದ ಹಾವೇರಿ ಜಿಲ್ಲೆಯ ಕಡೂರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯ ಎಂ.ಎನ್. ಕೆರೂರ, ಸಂಪನ್ಮೂಲ ವ್ಯಕ್ತಿ ಎಚ್.ಆರ್. ವೆಂಕಣ್ಣನವರ, ಎಸ್‌ಡಿಎಂಸಿ ಅಧ್ಯಕ್ಷರು, ವಲಯದ ಮೇಲ್ವಿಚಾರಕ ನಾಗರಾಜ್ ಹಾಗೂ ಸೇವಾ ಪ್ರತಿನಿಧಿ ಸುಮಾ ಕಾರ್ಯಕ್ರಮ ಉದ್ಘಾಟಿಸಿದರು.

ವಲಯದ ಮೇಲ್ವಿಚಾರಕ ನಾಗರಾಜ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಸ್ವಾಸ್ಥ್ಯ ಸಂಕಲ್ಪ ಅಭಿಯಾನದ ಉದ್ದೇಶಗಳ ಕುರಿತು ಮಾಹಿತಿ ನೀಡಿದರು. ದುಶ್ಚಟಗಳಿಂದ ಆರೋಗ್ಯ, ಕುಟುಂಬ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು.

ಸಂಪನ್ಮೂಲ ವ್ಯಕ್ತಿ ಎಚ್.ಆರ್. ವೆಂಕಣ್ಣನವರ ಮಾತನಾಡಿ, "ದುಶ್ಚಟಗಳಿಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟಕರ. ಆದ್ದರಿಂದ ಜೀವನದಲ್ಲಿ ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು" ಎಂದರು.

ಈ ವೇಳೆ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞೆ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.

Edited By :
PublicNext

PublicNext

05/08/2026 10:53 pm

Cinque Terre

2.1 K

Cinque Terre

0

ಸಂಬಂಧಿತ ಸುದ್ದಿ