ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚಿದ ಕುತೂಹಲ: ಡಿಕೆಶಿ ಜೊತೆ ಕ್ರೇಜಿಸ್ಟಾರ್ ರವಿಚಂದ್ರನ್ ಚರ್ಚಿಸಿದ್ದೇನು?

ಬೆಂಗಳೂರು : ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ 'ಕ್ರೇಜಿಸ್ಟಾರ್' ವಿ. ರವಿಚಂದ್ರನ್ ಅವರು ಇಂದು ಭೇಟಿ ನೀಡಿ, ಸುದೀರ್ಘ ಸಮಾಲೋಚನೆ ನಡೆಸಿರುವುದು ರಾಜಕೀಯ ಹಾಗೂ ಗಾಂಧಿನಗರದ ಅಂಗಳದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಈ ಭೇಟಿಯ ವೇಳೆ ಇಬ್ಬರೂ ಪ್ರಚಲಿತ ವಿದ್ಯಮಾನಗಳು ಹಾಗೂ ಕನ್ನಡ ಚಿತ್ರರಂಗ ಎದುರಿಸುತ್ತಿರುವ ನಾನಾ ಸವಾಲುಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಕೇವಲ ಸೌಹಾರ್ದಯುತ ಭೇಟಿ ಎಂದು ಹೇಳಲಾಗುತ್ತಿದ್ದರೂ, ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕರಾದ ರವಿಚಂದ್ರನ್ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಸಿನಿಮಾ ರಂಗದ ಅಭಿವೃದ್ಧಿ ಅಥವಾ ವಿಶೇಷ ಯೋಜನೆಯೊಂದರ ಕುರಿತು ಈ ಭೇಟಿಯಲ್ಲಿ ಮಾತುಕತೆ ನಡೆದಿದೆಯೇ ಎಂಬ ಬಗ್ಗೆ ಅಧಿಕೃತ ಮಾಹಿತಿ ಹೊರಬರಬೇಕಿದ್ದು, ಈ ಹೈಪ್ರೊಫೈಲ್ ಭೇಟಿಯ ವೀಡಿಯೋ ಹಾಗೂ ಫೋಟೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

Edited By : Somashekar
PublicNext

PublicNext

06/08/2026 12:22 am

Cinque Terre

478

Cinque Terre

0

ಸಂಬಂಧಿತ ಸುದ್ದಿ