ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದನ್ನು ಯುದ್ಧ ಗೆದ್ದಂತೆ ಸಂಭ್ರಮಿಸುವುದು ಮೂರ್ಖತನ ಎಂದು ಬಿಜೆಪಿ ಮುಖಂಡ ಹಾಗೂ ಯೋಗೇಶಗೌಡ ಅವರ ಸಹೋದರ ಗುರುನಾಥಗೌಡ ಹೇಳಿದರು.
ಧಾರವಾಡ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತು ವಕೀಲರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ" ಎಂದರು.
"ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಅವರು ಶಿಕ್ಷೆ ಅನುಭವಿಸುತ್ತಿದ್ದರು. ಇದೀಗ ಮಧ್ಯಂತರ ಜಾಮೀನು ದೊರೆತಿರುವುದನ್ನೇ ಕೆಲವರು ದೊಡ್ಡ ವಿಜಯದಂತೆ ಬಿಂಬಿಸಿ ಸಂಭ್ರಮಿಸುತ್ತಿರುವುದು ಸರಿಯಲ್ಲ" ಎಂದು ಟೀಕಿಸಿದರು.
ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ನ್ಯಾಯ ದೊರೆಯುವವರೆಗೆ ತಮ್ಮ ಕುಟುಂಬ ಕಾನೂನು ಹೋರಾಟವನ್ನು ಮುಂದುವರಿಸಲಿದೆ ಎಂದು ಗುರುನಾಥಗೌಡ ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/08/2026 12:27 am
LOADING...