ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಹಕಜನ್ಯ ಸೋಂಕು ತಡೆಗಟ್ಟಲು ಸ್ವಚ್ಛತೆ ಕಾಪಾಡಿ : ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 10ರಂದು ಜಿಲ್ಲಾದ್ಯಂತ ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಇದರ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆ ಹಾಗೂ ರಾಷ್ಟ್ರೀಯ ವಾಹಕಗಳಿಂದ ಹರಡುವ ರೋಗ ನಿಯಂತ್ರಣ ಕಾರ್ಯಕ್ರಮ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಂತು ಹುಳುಗಳ ಸೋಂಕಿನಿಂದ ದೇಹವು ಪೋಷಕಾಂಶಗಳನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ಕಲಿಕೆಯಲ್ಲಿ ಹಿಂದುಳಿಯುವಿಕೆ ಮುಂತಾದ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಉಚಿತವಾಗಿ ನೀಡಲಾಗುವ ಆಲ್ಬೆಂಡಜೋಲ್ ಮಾತ್ರೆಗಳನ್ನು ಸೇವಿಸಬೇಕು ಎಂದು ಹೇಳಿದರು.

ಆಗಸ್ಟ್ 10ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಶಿಕ್ಷಕರು ಮಾತ್ರೆಗಳನ್ನು ವಿತರಿಸಲಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಮಾತ್ರೆ ವಿತರಿಸಲಿದ್ದಾರೆ ಎಂದರು.

Edited By : PublicNext Desk
PublicNext

PublicNext

06/08/2026 09:20 am

Cinque Terre

3.42 K

Cinque Terre

0

ಸಂಬಂಧಿತ ಸುದ್ದಿ