ಬೆಂಗಳೂರು: ನಗರದ ಜೆ.ಸಿ. ರಸ್ತೆಯ ವಿನೋಬನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ನಿನ್ನೆ ಸಂಜೆ 6 ಗಂಟೆಯ ಸುಮಾರಿಗೆ ‘ದೊಡ್ಡಿ ವಂಶ’ ಹಾಗೂ ವಿನೋಬನಗರದ ಮೌಲಾನಾ ಬೆಂಬಲಿಗರ ಎರಡು ಗುಂಪುಗಳ ನಡುವೆ ಭೀಕರ ಮಾರಾಮಾರಿ ನಡೆದಿದೆ.
ಪುಂಡರು ಸಾರ್ವಜನಿಕ ರಸ್ತೆಯಲ್ಲೇ ಲಾಂಗು, ಮಚ್ಚುಗಳನ್ನು ಝಳಪಿಸಿ ಪರಸ್ಪರ ದಾಳಿ ನಡೆಸಿದ್ದಾರೆ. ಈ ರಕ್ತಸಿಕ್ತ ಕ್ರೌರ್ಯದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಗಲಾಟೆಯಲ್ಲಿ ಅಜಮ್, ಅಮ್ಜದ್, ಅವೈಜ್, ಮುಬಾರಕ್, ಖಲೀಲ್ ಹಾಗೂ ಇಲ್ಲುಬಾ ಎಂಬ ಪುಂಡರು ಭೀಕರ ಅಟ್ಟಹಾಸ ಮೆರೆದು ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ.
ಈ ಘಟನೆ ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಾರ್ವಜನಿಕರ ಶಾಂತಿಗೆ ಭಂಗ ತಂದಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
PublicNext
06/08/2026 10:26 am
LOADING...