ಕುಂದಾಪುರ : ನಗರದ ಚರ್ಚ್ ರಸ್ತೆಯಲ್ಲಿ ಕಳೆದ ಮೇ 31ರಂದು ನಸುಕಿನ ಜಾವ ಬಾರ್ಕೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ರೈಫಲ್‌ನಿಂದ ಗುಂಡಿಕ್ಕಿ ಕೊಲೆಗೈದ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತ (55)ನನ್ನು ಕುಂದಾಪುರ ಪೊಲೀಸರು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು.
ಆರೋಪಿಯನ್ನು ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಹೇರಬುಡಿಕೆ ಪ್ರದೇಶದಲ್ಲಿ ಆಗಸ್ಟ್ 1ರಂದು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಗಾಗಿ ಆಗಸ್ಟ್ 2ರಂದು ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
PublicNext
06/08/2026 11:26 am
LOADING...