ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ ಪ್ರಶಾಂತ ಹಿರೇಮಠ ನೇಮಕ

ಬೈಲಹೊಂಗಲ : ಕರ್ನಾಟಕ ಸರ್ಕಾರದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಅಧೀನದಲ್ಲಿರುವ ಬೆಳಗಾವಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಬೈಲಹೊಂಗಲ ನಗರದ ಶ್ರೀ ವೀರಾಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಶಾಂತ ಈರಯ್ಯ ಹಿರೇಮಠ ಅವರು ಆಗಮ ವಿಭಾಗದಲ್ಲಿ ಮುಂದಿನ ಅವಧಿಗೆ ನೇಮಕಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರು ಪ್ರಶಾಂತ ಹಿರೇಮಠ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭಾಶಯ ಕೋರಿದರು. ಧಾರ್ಮಿಕ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಹೊಂದಿರುವ ಅನುಭವಕ್ಕೆ ಸಂದ ಗೌರವವಾಗಿ ಈ ನೇಮಕವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ರಾಜ್ಯ ಮುಜರಾಯಿ ಇಲಾಖೆಯ ನಿರ್ದೇಶಕರಾದ ಡಾ. ಮಹಾಂತೇಶ ಶಾಸ್ತ್ರಿ ಆರಾದ್ರಿಮಠ ಸೇರಿದಂತೆ ಗಣ್ಯರು ಹಾಗೂ ದೇವಸ್ಥಾನದ ಭಕ್ತರು ಉಪಸ್ಥಿತರಿದ್ದು, ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

06/08/2026 11:29 am

Cinque Terre

4.18 K

Cinque Terre

0