ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಕಲಿ ಬಂಗಾರದ ನಾಣ್ಯ ನೀಡಿ ₹9.60 ಲಕ್ಷ ವಂಚನೆ: ನಗದು ಸಹಿತ ಆರೋಪಿ ವಶಕ್ಕೆ

ಶಿವಮೊಗ್ಗ: ಕಡಿಮೆ ಬೆಲೆಗೆ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹9.60 ಲಕ್ಷ ನಗದು ಪಡೆದು ನಕಲಿ ಬಂಗಾರದ ಆಭರಣಗಳನ್ನು ನೀಡಿ ವಂಚನೆ ಎಸಗಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಆನಂದಪುರ ಪೊಲೀಸರು ಬಂಧಿಸಿದ್ದು, ಆತನಿಂದ ₹7.10 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ದೂರುದಾರರಾದ ಜಗದೀಶ್ ಅವರಿಗೆ ಆರೋಪಿ ಮಂಜು ಹಾಗೂ ಇತರ ಐವರು ತಮ್ಮ ಬಳಿ ಬಂಗಾರದ ನಾಣ್ಯಗಳಿದ್ದು, ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿದ್ದರು. ಅದರಂತೆ 2026ರ ಜೂನ್ 4ರಂದು ಬೆಳಿಗ್ಗೆ ಸಾಗರ ತಾಲೂಕಿನ ಜೋಗಿನಗದ್ದೆ ಗ್ರಾಮಕ್ಕೆ ಜಗದೀಶ್ ಅವರನ್ನು ಕರೆಸಿಕೊಂಡು ₹9.60 ಲಕ್ಷ ನಗದು ಪಡೆದು, ಬಳಿಕ ನಕಲಿ ಬಂಗಾರದ ಆಭರಣಗಳನ್ನು ನೀಡಿ ವಂಚನೆ ಎಸಗಿದ್ದರು.

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 97/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಠಾಣಾಧಿಕಾರಿ ಪ್ರವೀಣ್ ಎಸ್.ಪಿ. (ಪಿಎಸ್‌ಐ) ನೇತೃತ್ವದ ವಿಶೇಷ ಪೊಲೀಸ್ ತಂಡ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿತ್ತು.

ತನಿಖೆಯ ವೇಳೆ ಆಗಸ್ಟ್ 4, 2026ರಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಯಲ್ಲಾಪುರ ಗ್ರಾಮದ ನಿವಾಸಿ ಮಂಜುನಾಥ್ ವಿ. (30) ಎಂಬಾತನನ್ನು ಬಂಧಿಸಲಾಯಿತು. ಬಂಧಿತ ಆರೋಪಿಯಿಂದ ಪ್ರಕರಣಕ್ಕೆ ಸಂಬಂಧಿಸಿದ ₹7.10 ಲಕ್ಷ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Edited By : PublicNext Desk
PublicNext

PublicNext

06/08/2026 01:32 pm

Cinque Terre

3.29 K

Cinque Terre

0

ಸಂಬಂಧಿತ ಸುದ್ದಿ