ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಗೇಂದ್ರಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ: ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ

ಸಾಗರ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸಂಪುಟದಲ್ಲಿ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ನಿರ್ಧಾರ ಸಂಪೂರ್ಣ ತಪ್ಪಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆ ಸಾರ್ವಜನಿಕರಲ್ಲಿ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಆರೋಪಿಸಿದರು.

ಬಿ. ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ನಡೆಯುತ್ತಿದ್ದು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ ಸಂದರ್ಭದಲ್ಲಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ತಾವು ಹಿಂದೆ ಪ್ರಕರಣ ಎದುರಿಸಿ ನ್ಯಾಯಾಲಯದಿಂದ ಕ್ಲೀನ್ ಚಿಟ್ ಪಡೆದಿದ್ದಾಗಿ ಹೇಳಿದ ಅವರು, ಜಾಮೀನಿನ ಮೇಲಿರುವ ವ್ಯಕ್ತಿಗೆ ಮಂತ್ರಿ ಸ್ಥಾನ ನೀಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುತ್ತದೆ ಎಂದರು.

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ ಕುರಿತು ಮಾತನಾಡಿದ ಅವರು, ಆರಂಭದಲ್ಲಿ ₹187 ಕೋಟಿ ಅಕ್ರಮ ನಡೆದಿದೆ ಎಂದು ಹೇಳಲಾಗಿತ್ತು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹87 ಕೋಟಿ ದುರ್ಬಳಕೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಆ ಹಣ ಎಲ್ಲಿಗೆ ಹೋಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆಯೇ ಎಂಬ ಶಂಕೆ ವ್ಯಕ್ತಪಡಿಸಿದ ಹರತಾಳು ಹಾಲಪ್ಪ, ಈ ವಿಷಯದಲ್ಲಿ ಬಿಜೆಪಿ ಸದನದ ಒಳಗೂ ಹೊರಗೂ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

Edited By : PublicNext Desk
PublicNext

PublicNext

06/08/2026 01:37 pm

Cinque Terre

5.49 K

Cinque Terre

0

ಸಂಬಂಧಿತ ಸುದ್ದಿ