ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ಅಪಘಾತ: ತಂದೆ-ಮಗಳು ಸೇರಿ ಮೂವರ ದಾರುಣ ಸಾವು

ಗೋಕಾಕ : ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರಿನಲ್ಲಿ ನಡೆದಿದೆ.

ಅಪಘಾತದಲ್ಲಿ ತಂದೆ ಸೈಫ್ ಮುಲ್ಲಾ (29), ಮಗಳು ಸಿಜಾ ಮುಲ್ಲಾ (4) ಹಾಗೂ ಕುಟುಂಬದ ಗೆಳೆಯ ಇಮ್ತಿಯಾಜ್ ಬಡಗಾಂವ (35) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನೋರ್ವ ಮಗು ಜಿಹಾನ ಶಾರುಕ್ ಕುಡಚಿಕರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ಹಿಡಕಲ್‌ನಿಂದ ಗೋಕಾಕಕ್ಕೆ ತೆರಳುತ್ತಿದ್ದ ಬಸ್ ಹಾಗೂ ಗೋಕಾಕ್ ಫಾಲ್ಸ್‌ನ ಫೋರ್ಬ್ಸ್ ಶಾಲೆಯಿಂದ ಮಗುವನ್ನು ಕರೆದುಕೊಂಡು ಕೊಣ್ಣೂರಿಗೆ ತೆರಳುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

Edited By :
PublicNext

PublicNext

06/08/2026 02:32 pm

Cinque Terre

8.4 K

Cinque Terre

0

ಸಂಬಂಧಿತ ಸುದ್ದಿ