ಚಿಕ್ಕಮಗಳೂರು: ಸಚಿವ ಸಂಪುಟ ವಿಸ್ತರಣೆಯ ಕೊನೆಯ ಕ್ಷಣದಲ್ಲಿ ಮಂತ್ರಿಗಿರಿ ಕೈತಪ್ಪಿರುವ ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡೆ ಕುಸುಮ ಭರತ್, ಚಿಕ್ಕಮಗಳೂರು ಜಿಲ್ಲೆಯಿಂದ ಐದು ಜನ ಶಾಸಕರು ಮತ್ತು ಇಬ್ಬರು ಎಂಎಲ್‌ಸಿಗಳಿದ್ದು, ಇಡೀ ಜಿಲ್ಲೆಯ ಪರವಾಗಿ ಹಾಗೂ ಜಿಲ್ಲೆಯ ಅಗತ್ಯಗಳನ್ನು ಈಡೇರಿಸಲು ಗಾಯತ್ರಿ ಶಾಂತೇಗೌಡ ಅವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕಳೆದ 30-40 ವರ್ಷಗಳಿಂದ ನಿಷ್ಠೆಯಿಂದ ಪಕ್ಷಕ್ಕಾಗಿ ಶ್ರಮಿಸಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿರುವ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಗಾಯತ್ರಿ ಶಾಂತೇಗೌಡ ಅವರಿಗೆ ಪರಿಷತ್ ಉಪಸಭಾಪತಿ ಸ್ಥಾನ ನೀಡುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಉಪಸಭಾಪತಿ ಸ್ಥಾನಕ್ಕಿಂತ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡುವುದೇ ಸೂಕ್ತ ಎಂದು ತಿಳಿಸಿದ್ದಾರೆ.
PublicNext
06/08/2026 03:00 pm
LOADING...