ಧಾರವಾಡ: ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರದ ಆರೋಪಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಎಐಡಿವೈಓ ಸಂಘಟನೆಯ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ನಡೆಸಿದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ವಿಷಯ ತಜ್ಞರನ್ನು ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಬೇಕು, ಕೆಪಿಎಸ್‌ಸಿಯ ಎಲ್ಲಾ ಹಂತದ ಸಿಬ್ಬಂದಿಯನ್ನು ನಿಯಮಿತವಾಗಿ ವರ್ಗಾವಣೆ ಮಾಡಬೇಕು ಮತ್ತು ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ಸಮಯಬದ್ಧ ಹಾಗೂ ಭ್ರಷ್ಟಾಚಾರಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/08/2026 03:18 pm
LOADING...