ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

​ಜೈಲಿನಲ್ಲಿರುವ ಸಹೋದರನ ನೋಡಲು ತೆರಳುತ್ತಿದ್ದಾಗ ದುರಂತ : ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ಪುತ್ರ ಅಪಘಾತದಲ್ಲಿ ಸಾವು

​ಝಾನ್ಸಿ: ದಿವಂಗತ ಗ್ಯಾಂಗ್‌ಸ್ಟಾರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಅಹ್ಮದ್ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

​ಝಾನ್ಸಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಜೈಲಿನಲ್ಲಿರುವ ತಮ್ಮ ಸಹೋದರನನ್ನು ಭೇಟಿಯಾಗಲು ಅಬಾನ್ ಅಹ್ಮದ್ ಕ್ರೇಟಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಾಜಕಕ್ಕೆ (Highway Divider) ಬಲವಾಗಿ ಡಿಕ್ಕಿ ಹೊಡೆದಿದೆ.

​ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಅಬಾನ್ ಅಹ್ಮದ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By :
PublicNext

PublicNext

06/08/2026 03:53 pm

Cinque Terre

22.04 K

Cinque Terre

3