ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಭೂಕುಸಿತ ಹಿನ್ನೆಲೆ - ತೊಂದರೆಗೊಳಗಾಗಿರುವ ಕುಟುಂಬಗಳಿಗೆ ಕಾಳಜಿ ಕೇಂದ್ರದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ

ಕಾರ್ಕಳ: ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಹಿತ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಭೂಕುಸಿತದಿಂದ ತೊಂದರೆಗೊಳಗಾಗುವ ಕುಟುಂಬಗಳಿಗೆ ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ರೆಂಜಾಳ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತೆ ಸೂಚಿಸಲಾಯಿತು.

ಇನ್ನೂ ಹೆಚ್ಚಿನ ಭೂಕುಸಿತ ಉಂಟಾಗುವ ಸಂಭವ ಇರುವುದರಿಂದ ತಕ್ಷಣ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣೆ ಇಲಾಖೆಯ (GSI) ನಿರ್ದೇಶಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಕೂಡಲೇ ಅಧ್ಯಯನಕ್ಕೆ ತಂಡವನ್ನು ಕಳುಹಿಸಿಕೊಡುವಂತೆ ಕೋರಲಾಯಿತು. ವಿಜ್ಞಾನಿಗಳ ತಂಡವು ಬೆಂಗಳೂರಿನಿಂದ ಆಗಮಿಸಿ ಸ್ಥಳ ಪರಿಶೀಲಿಸುವ ಸಾಧ್ಯತೆ ಇದೆ.

ಸ್ಥಳೀಯ ಅಧಿಕಾರಿಗಳಿಗೆ ನಿರಂತರ ನಿಗಾ ವಹಿಸಿ ಯಾರಿಗೂ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

Edited By : Vinayak Patil
PublicNext

PublicNext

06/08/2026 04:01 pm

Cinque Terre

8.69 K

Cinque Terre

0