ಬೆಂಗಳೂರು: ಯಲಹಂಕ ಸಮೀಪದ ಜಕ್ಕೂರು ಬಳಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೃಷ್ಣ ರೆಸ್ಟೊರೆಂಟ್ ಹಿಂಭಾಗದ ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಮೃತದೇಹಗಳು ಇಂದು ಬೆಳಿಗ್ಗೆ ಪತ್ತೆಯಾಗಿವೆ.
ಮೃತ ಯುವತಿಯರನ್ನು ನೇಪಾಳ ಮೂಲದ ಸಿರ್ಜನಾ (22) ಮತ್ತು ರಿತಾ (23) ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಯಲಹಂಕ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರೂ ಒಂದೇ ಮರಕ್ಕೆ ನೇಣು ಬಿಗಿದುಕೊಂಡಿರುವುದು ಸ್ಥಳೀಯರಲ್ಲಿ ತೀವ್ರ ದಿಗ್ಭ್ರಮೆ ಹಾಗೂ ಆತಂಕ ಮೂಡಿಸಿದೆ. ಪ್ರಸ್ತುತ ಯುವತಿಯರ ಸಾವಿಗೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಇದು ಆತ್ಮಹತ್ಯೆಯೋ ಅಥವಾ ಬೇರೆನಾದರೂ ಕೃತ್ಯವೋ ಎಂಬ ಕೋನದಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೆತ್ತಿಕೊಂಡಿದ್ದಾರೆ.
PublicNext
06/08/2026 04:18 pm
LOADING...