ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ ಸರಣಿ ಅಪಘಾತ: ಹಲವು ಪ್ರಯಾಣಿಕರಿಗೆ ಗಾಯ!

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ನೇಕಾರ ನಗರ ಸೇತುವೆ ಮೇಲೆ ಲಾರಿ ಹಾಗೂ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸೂಕ್ತ ಮುನ್ನೆಚ್ಚರಿಕಾ ಸೂಚನಾ ಫಲಕಗಳನ್ನು ಅಳವಡಿಸದೇ ಏಕಾಏಕಿ ರಸ್ತೆ ತಿರುವು ನೀಡಿದ್ದೇ ಈ ಅಪಘಾತಕ್ಕೆ ಮುಖ್ಯ ಕಾರಣ ಎಂದು ಹೇಳಲಾಗಿದೆ. ಮುಂದೆ ತೆರಳುತ್ತಿದ್ದ ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಅವುಗಳ ಹಿಂದೆ ಬರುತ್ತಿದ್ದ ಇತರ ವಾಹನಗಳೂ ಸಹ ಒಂದಕ್ಕೊಂದು ಸರಣಿಯಾಗಿ ಡಿಕ್ಕಿ ಹೊಡೆದಿವೆ.

ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ರಸ್ತೆಯಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತು ಸಂಚಾರ ದಟ್ಟಣೆ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

- ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/08/2026 04:44 pm

Cinque Terre

23.27 K

Cinque Terre

1

ಸಂಬಂಧಿತ ಸುದ್ದಿ