ಶಿವಮೊಗ್ಗ: ಭದ್ರಾವತಿ ನಗರದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆ, ಗಾಂಜಾ ಮಾರಾಟ ಹಾಗೂ ಅಕ್ರಮ ಚಟುವಟಿಕೆಗಳನ್ನು ಖಂಡಿಸಿ ಭದ್ರಾವತಿಯಲ್ಲಿ ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಯಿತು.
ನಗರ ಮಂಡಲ ಅಧ್ಯಕ್ಷ ಧರ್ಮ ಪ್ರಸಾದ್ ಜಿ. ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೈಪಾಸ್ ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಓಸಿ, ಮಟ್ಕಾ, ಇಸ್ಪೀಟ್ ಹಾಗೂ ಗಾಂಜಾ ದಂಧೆಯನ್ನು ತಕ್ಷಣ ಸಂಪೂರ್ಣವಾಗಿ ನಿಲ್ಲಿಸಬೇಕು. ಅಪರಾಧಿಗಳಿಗೆ ಯಾವುದೇ ರಕ್ಷಣೆ ನೀಡದೆ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಾಲೆ, ಕಾಲೇಜು ಹಾಗೂ ವಸತಿ ನಿಲಯಗಳ ಸಮೀಪ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕೆಂದು ಧರ್ಮ ಪ್ರಸಾದ್ ಒತ್ತಾಯಿಸಿದರು.
ಮುಖಂಡರಾದ ಮಂಗೋಟೆ ರುದ್ರೇಶ್ ಸೇರಿದಂತೆ ಹಲವರು ಪೊಲೀಸ್ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸಿ, ಅಪರಾಧ ಮುಕ್ತ ಭದ್ರಾವತಿಗಾಗಿ ಡಿವೈಎಸ್ಪಿಗೆ ಮನವಿ ಪತ್ರ ಸಲ್ಲಿಸಿದರು.
PublicNext
06/08/2026 04:46 pm
LOADING...