ಶಿವಮೊಗ್ಗ: ನವ ವಸಾಹತುಶಾಹಿ ಕಾರ್ಪೋರೇಟ್ ಆಳ್ವಿಕೆಯ ವಿರುದ್ಧ “ಕಾರ್ಪೋರೇಟ್‌ಗಳೇ ದೇಶ ಬಿಟ್ಟು ತೊಲಗಿ” ಎಂಬ ಘೋಷಣೆಯಡಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಕರೆಯ ಮೇರೆಗೆ ಆಗಸ್ಟ್ 10ರಂದು ಬೆಳಿಗ್ಗೆ 10.30ಕ್ಕೆ ಶಿವಪ್ಪನಾಯಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ, ಕಾರ್ಮಿಕ ವಿರೋಧಿ, ದಲಿತ ವಿರೋಧಿ, ಮಹಿಳಾ ವಿರೋಧಿ ಹಾಗೂ ಜನವಿರೋಧಿ ಕಾನೂನು ಮತ್ತು ನೀತಿಗಳನ್ನು ಜಾರಿಗೊಳಿಸುತ್ತಿರುವುದರ ಜೊತೆಗೆ ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಹತ್ತಿಕ್ಕುತ್ತಿವೆ ಎಂದು ಆರೋಪಿಸಿದರು.
ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ, ಕಾರ್ಪೋರೇಟ್ ಭೂ ಕಬಳಿಕೆ, ಕನಿಷ್ಠ ಕೂಲಿ ಪರಿಷ್ಕರಣೆ ವಿರೋಧ, ಬೀಜ ಕಾಯ್ದೆ, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
PublicNext
06/08/2026 05:16 pm
LOADING...