ಶಿವಮೊಗ್ಗ: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಕ್ಷಣ ನಿವಾರಿಸುವಂತೆ ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟವು ಆರ್‌ಟಿಒ ಕಚೇರಿ ಎದುರು ಪ್ರತಿಭಟನೆ ನಡೆಸಿ ಇಲಾಖೆಗೆ ಮನವಿ ಸಲ್ಲಿಸಿತು.
ಆರ್‌ಟಿಒ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿರುವುದರಿಂದ ಕಚೇರಿಗೆ ಬರುವ ನಾಗರಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯವನ್ನು ಎಲ್ಲ ಸಮಯದಲ್ಲೂ ತೆರೆಯಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸರ್ಕಾರಿ ಸೇವಾ ಶುಲ್ಕ ಫಲಕವನ್ನು ಸಾರ್ವಜನಿಕರಿಗೆ ಸುಲಭವಾಗಿ ಕಾಣುವ ಸ್ಥಳದಲ್ಲಿ ಪ್ರದರ್ಶಿಸದೆ ಒಂದು ಮೂಲೆಯಲ್ಲಿ ಅಳವಡಿಸಿರುವುದನ್ನು ವೇದಿಕೆ ಖಂಡಿಸಿದೆ. ಅದನ್ನು ಎಲ್ಲರಿಗೂ ಗೋಚರಿಸುವ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮನವಿ ಮಾಡಲಾಗಿದೆ.
ಆರ್‌ಟಿಒ ಕಚೇರಿಯಲ್ಲಿ ಕೆಲವು ಅನಧಿಕೃತ ವ್ಯಕ್ತಿಗಳು ಕಚೇರಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಬಗ್ಗೆ ಟ್ಯಾಕ್ಸಿ ಹಾಗೂ ಆಟೋ ಮಾಲೀಕರು ಸೇರಿದಂತೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿವೆ ಎಂದು ವೇದಿಕೆ ತಿಳಿಸಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
PublicNext
06/08/2026 05:30 pm
LOADING...