ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ಳಂಬೆಳಗ್ಗೆ ನಗರಸಭೆ ಅಧಿಕಾರಿಗಳ ಚಳಿ ಬಿಡಿಸಿದ ಉಪಲೋಕಾಯುಕ್ತರು!

ಗದಗ : ನಗರದ ಬಳಗಾನೂರ ರಸ್ತೆಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಗುರುವಾರ ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಮಾರು 13 ವರ್ಷಗಳಿಂದ ಕಸ ನಿರ್ವಹಣಾ ಘಟಕದಲ್ಲಿ ಇದೇ ರೀತಿಯ ಅವ್ಯವಸ್ಥೆ ಮುಂದುವರಿದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಅಧಿಕಾರಿಗಳ ನಿರ್ಲಕ್ಷ್ಯವನ್ನು ಪ್ರಶ್ನಿಸಿದರು. ಅನುದಾನದ ಕೊರತೆಯಿದ್ದರೆ ಸರ್ಕಾರದ ಗಮನಕ್ಕೆ ತಂದು ಅಗತ್ಯ ಹಣ ಮಂಜೂರು ಮಾಡಿಸಲು ತಾವು ನೆರವಾಗುವುದಾಗಿ ತಿಳಿಸಿದ ಅವರು, ಅನುದಾನವನ್ನು ನೆಪವಾಗಿಸಿಕೊಳ್ಳದೆ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಸೂಚಿಸಿದರು.

"ಕೂಡಲೇ ಪರಿಸರ ತಜ್ಞರನ್ನು ಕರೆಸಿ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.

ಉಪಲೋಕಾಯುಕ್ತರು ಸ್ಥಳದಲ್ಲೇ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಸ ನಿರ್ವಹಣೆಯಲ್ಲಿ ಕಂಡುಬಂದ ಲೋಪಗಳನ್ನು ತಕ್ಷಣ ಸರಿಪಡಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

Edited By :
PublicNext

PublicNext

06/08/2026 05:34 pm

Cinque Terre

8.63 K

Cinque Terre

0

ಸಂಬಂಧಿತ ಸುದ್ದಿ