ಬೆಂಗಳೂರು: ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸಿರುವ ಅನಾಥ ವಾಹನಗಳನ್ನು ಆಗಿಂದಾಗ್ಗೆ ಹರಾಜು ಪ್ರಕ್ರಿಯೆಗೆ ಒಳಪಡಿಸುವಂತೆ ಅಪರ ಆಯುಕ್ತ ಡಾ. ನವೀನ್ ಕುಮಾರ್ ರಾಜು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಗುರುವಾರ ಆರ್‌ಟಿಒ (RTO), ಸಂಚಾರ ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಅವರು ವರ್ಚುವಲ್ ಸಭೆ ನಡೆಸಿ, ಅನಾಥ ವಾಹನಗಳ ತೆರವು ಮತ್ತು ಹರಾಜು ಪ್ರಕ್ರಿಯೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.
ಜಯನಗರ, ಜೆ.ಪಿ.ನಗರ, ಕೆ.ಎಸ್.ಲೇಔಟ್ ಹಾಗೂ ತಿಲಕ್ ನಗರ ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಇದುವರೆಗೆ 328 ವಾಹನಗಳಿಗೆ ನೋಟಿಸ್ ಅಂಟಿಸಲಾಗಿದೆ. ಈ ಪೈಕಿ 40 ವಾಹನಗಳನ್ನು ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ.
ಇದರೊಂದಿಗೆ ಹೊಸದಾಗಿ ಗುರುತಿಸಲಾದ 18 ರಿಂದ 20 ವಾಹನಗಳಿಗೆ ನೋಟಿಸ್/ಸ್ಟಿಕ್ಕರ್ ಅಂಟಿಸಿ 7 ದಿನಗಳ ಕಾಲಾವಕಾಶ ನೀಡಬೇಕು. ನಿಗದಿತ ಅವಧಿಯಲ್ಲಿ ವಾಹನಗಳ ಮಾಲೀಕರು ಸ್ಪಂದಿಸದಿದ್ದರೆ ಅವುಗಳನ್ನು ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಸಂಚಾರ ಪೊಲೀಸ್ ಇನ್‌ಸ್ಪೆಕ್ಟರ್‌ಗಳು, ಆರ್‌ಟಿಒ ಅಧಿಕಾರಿಗಳು ಹಾಗೂ ಪಾಲಿಕೆಯ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
06/08/2026 06:02 pm
LOADING...