ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್‌ನಲ್ಲಿ ಕ್ರೀಡಾಂಗಣದಲ್ಲೇ ದಾರುಣ ಘಟನೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು

ಸುರತ್ಕಲ್ : ಸ್ನೇಹಿತರೊಂದಿಗೆ ವಾಲಿಬಾಲ್‌ ಆಡುತ್ತಿದ್ದ ವೇಳೆ ಬಾಲಕನೊಬ್ಬ ಹಠಾತ್ ಕುಸಿದುಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಸುರತ್ಕಲ್ ಬಳಿಯ ಸೂರಿಂಜೆ ಗ್ರಾಮದಲ್ಲಿ ನಡೆದಿದ್ದು, ಬಾಲಕ ಕುಸಿದುಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಲಿಖಿತ್ ಅಮೀನ್ (15) ಮೃತಪಟ್ಟ ಬಾಲಕ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ. ಓದಿನೊಂದಿಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಬುಧವಾರ ಸೂರಿಂಜೆ ಮೈದಾನದಲ್ಲಿ ಲಿಖಿತ್ ತನ್ನ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಮೈದಾನದಲ್ಲೇ ಕುಸಿದುಬಿದ್ದಿದ್ದಾನೆ. ಸ್ಥಳದಲ್ಲಿದ್ದವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನೈಜ ಕಾರಣ ತಿಳಿಯುವ ಸಾಧ್ಯತೆಯಿದೆ.

Edited By : Vinayak Patil
PublicNext

PublicNext

06/08/2026 06:48 pm

Cinque Terre

5.92 K

Cinque Terre

0