ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ : ಮಸೀದಿ, ಮದರಸಾ ಧ್ವನಿವರ್ಧಕ ತೆರವಿಗೆ ಸಾರ್ವಜನಿಕರ ಆಗ್ರಹ - ಉಪವಿಭಾಗಾಧಿಕಾರಿ, ಡಿವೈಎಸ್ಪಿಗೆ ಮನವಿ ಸಲ್ಲಿಕೆ !

ಸಾಗರ : ನಗರದ 28ನೇ ವಾರ್ಡ್ ವ್ಯಾಪ್ತಿಯ ಇಂದಿರಾಗಾಂಧಿ ಕಾಲೇಜು ಮೇಲ್ಭಾಗದಲ್ಲಿರುವ ಬಿಲಾಲ್ ಮಸೀದಿ ಮತ್ತು ಗೌಸಿಯಾ ಮದರಸಾಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕಗಳಿಂದ ನಿರಂತರ ಸಾರ್ವಜನಿಕ ಉಪದ್ರವ ಉಂಟಾಗುತ್ತಿದ್ದು, ಅವುಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ 'ಶಿವಪ್ಪನಾಯಕ ನಗರ ನಾಗರಿಕ ವೇದಿಕೆ' ಹಾಗೂ ಸ್ಥಳೀಯ ನಿವಾಸಿಗಳು ಉಪ ವಿಭಾಗಾಧಿಕಾರಿಗಳು ಮತ್ತು ಪೊಲೀಸ್ ಉಪ ಅಧೀಕ್ಷಕರಿಗೆ (ಡಿವೈಎಸ್ಪಿ) ಮನವಿ ಸಲ್ಲಿಸಿದರು.

ಸಲ್ಲಿಕೆಯಾದ ಮನವಿಯಲ್ಲಿ, ಮಸೀದಿ ಹಾಗೂ ಮದರಸಾಗಳಲ್ಲಿ ದಿನಕ್ಕೆ ಐದು ಬಾರಿ ಭಾರಿ ಶಬ್ದದೊಂದಿಗೆ ಮೈಕ್ ಬಳಸಿ ಪ್ರಾರ್ಥನೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ, ಪ್ರತಿದಿನ ಬೆಳಿಗ್ಗೆ 6:45 ಗಂಟೆಗೆ ಮದರಸಾದಿಂದ ಮಕ್ಕಳ ಮೂಲಕ ಮೈಕ್‌ನಲ್ಲಿ ದೊಡ್ಡದಾಗಿ ಪ್ರಾರ್ಥನೆಯನ್ನು ಬಿತ್ತರಿಸಲಾಗುತ್ತಿದ್ದು, ಸುತ್ತಮುತ್ತಲ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಪ್ರದೇಶದಲ್ಲಿ ಸುಮಾರು 5 ವಿದ್ಯಾರ್ಥಿ ಹಾಸ್ಟೆಲ್‌ಗಳಿದ್ದು, ಧ್ವನಿವರ್ಧಕಗಳ ಶಬ್ದದಿಂದಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಹಾಗೂ ವಯೋವೃದ್ಧರ ವಿಶ್ರಾಂತಿಗೆ ತೀವ್ರ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಅಲ್ಲದೆ, ಪ್ರತಿ ಶುಕ್ರವಾರ ನಮಾಜ್ ವೇಳೆಯಲ್ಲಿ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸುವುದರಿಂದ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಭಾರೀ ಅಡಚಣೆ ಉಂಟಾಗುತ್ತಿದೆ. ಹೊರರಾಜ್ಯಗಳಿಂದ ಮಕ್ಕಳನ್ನು ಕರೆತಂದು ಈ ರೀತಿಯ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ನಾಗರಿಕರು ದೂರಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಮಸೀದಿ ಮತ್ತು ಮದರಸಾಗಳಲ್ಲಿ ಅಳವಡಿಸಲಾಗಿರುವ ಮೈಕುಗಳನ್ನು ತೆರವುಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳ ಹೋರಾಟಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ನಗರಸಭಾ ಸದಸ್ಯ ಲಿಂಗರಾಜ್, ಮಾಜಿ ನಗರಸಭಾ ಉಪಾಧ್ಯಕ್ಷೆ ಸವಿತಾ ವಾಸು, ಪ್ರಮುಖರಾದ ರಾಘವೇಂದ್ರ, ವಿನೋದ್ ರಾಜ್ ಹಾಗೂ ಶಿವಪ್ಪನಾಯಕ ನಗರ ನಾಗರಿಕ ವೇದಿಕೆಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

06/08/2026 07:05 pm

Cinque Terre

2.06 K

Cinque Terre

0

ಸಂಬಂಧಿತ ಸುದ್ದಿ