ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೃಷಿ ಅಧಿಕಾರಿ ನೇಮಕಾತಿ ವಿವಾದ: ಸರ್ಕಾರ ಸ್ಪಂದನೆ; ಮೊದಲ ಹಂತದ ಜಯ ಎಂದ ಕೃಷಿ ವಿವಿ ವಿದ್ಯಾರ್ಥಿಗಳು

ಧಾರವಾಡ: ಕೃಷಿ ಅಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕಳೆದ 24 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮೊದಲ ಹಂತದ ಜಯ ದೊರೆತಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಭರತ್ ಕುಮಾರ್ ತಿಳಿಸಿದ್ದಾರೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿರುವುದು ವಿದ್ಯಾರ್ಥಿಗಳ ಹೋರಾಟದ ಫಲವಾಗಿದೆ ಎಂದು ಹೇಳಿದರು.

ಆದರೆ, ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳು ಸಂಪೂರ್ಣವಾಗಿ ಈಡೇರುವವರೆಗೆ ಹೋರಾಟವನ್ನು ಕೈಬಿಡುವುದಿಲ್ಲ. ಪೂರ್ಣ ಪ್ರಮಾಣದ ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರಿಗೆ ವಿದ್ಯಾರ್ಥಿಗಳು ಧನ್ಯವಾದ ಸಲ್ಲಿಸಿದರು. ಜೊತೆಗೆ ಹೋರಾಟಕ್ಕೆ ಬೆಂಬಲ ನೀಡಿದ ಜನಪ್ರತಿನಿಧಿಗಳು, ರೈತ ಸಂಘಟನೆಗಳು, ವಿದ್ಯಾರ್ಥಿಗಳು ಹಾಗೂ ಹೋರಾಟಗಾರರಿಗೂ ಕೃತಜ್ಞತೆ ವ್ಯಕ್ತಪಡಿಸಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/08/2026 07:28 pm

Cinque Terre

12.85 K

Cinque Terre

0

ಸಂಬಂಧಿತ ಸುದ್ದಿ