ಬೆಂಗಳೂರು: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದು ಕರ್ನಾಟಕದ ಕೀರ್ತಿಯನ್ನು ಹೆಚ್ಚಿಸಿದ ಪ್ಯಾರಾ ಅಥ್ಲೀಟ್ ಶಿಲ್ಪಾ ತವರೂರು ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿಲ್ಪಾ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಪ್ಯಾರಾ ಅಥ್ಲೀಟ್ ಶಿಲ್ಪಾ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸ್ಕಾಟ್‌ಲ್ಯಾಂಡ್ ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟ ನಡೆದಿತ್ತು.
ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರಕೊಪ್ಪಲು ಗ್ರಾಮದ ಸಾಮಾನ್ಯ ರೈತ ಕುಟುಂಬದ ಕುಡಿಯಾದ ಶಿಲ್ಪಾ ಅವರು ತಮ್ಮ ನಾಲ್ಕನೇ ವಯಸ್ಸಿನಲ್ಲಿದ್ದಾಗಲೇ ಭೀಕರ ಅಪಘಾತದಲ್ಲಿ ಎಡಗಾಲು ಕಳೆದುಕೊಂಡು ಅಂಗವೈಕಲ್ಯಕ್ಕೆ ತುತ್ತಾಗಿದ್ದರು. ಆ ನೋವು ಮತ್ತು ಅಂಗವೈಕಲ್ಯವನ್ನು ದಿಟ್ಟತನದಿಂದ ಮೆಟ್ಟಿ ನಿಂತ ಅವರು, ತಮ್ಮ ಧೃಡ ಸಂಕಲ್ಪದೊಂದಿಗೆ ಇಡೀ ರಾಷ್ಟ್ರವೇ ಹೆಮ್ಮೆಪಡುವ ಸಾಧನೆ ಮಾಡಿರೋದು ವಿಶೇಷವಾಗಿದೆ.
PublicNext
06/08/2026 07:37 pm
LOADING...