ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಬೆಳೆ ವೀಕ್ಷಣೆ ಮಾಡಿದ ಸಂತೋಷ್ ಲಾಡ್: ಜಮೀನಿನಲ್ಲಿ ರೈತರಿಗೆ ಧೈರ್ಯ ತುಂಬಿದ ಸಚಿವರು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟಕ್ಕಿಂತ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಹುಬ್ಬಳ್ಳಿ ತಾಲೂಕು ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳನ್ನು ಪರಿಶೀಲಿಸಿದರು.

ಶಾಸಕ ಎನ್.ಹೆಚ್. ಕೋನರೆಡ್ಡಿ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ತೆರಳಿ ರೈತರು ಬೆಳೆದ ಹೆಸರು ಬೆಳೆಯ ಸಮೀಕ್ಷೆ ನಡೆಸಿದರು. ಹುಬ್ಬಳ್ಳಿ ತಾಲೂಕು ಹಾಗೂ ಕುಂದಗೋಳ ಕ್ಷೇತ್ರದ ರೈತರ ಜಮೀನುಗಳನ್ನು ವೀಕ್ಷಿಸಿ ಅವರಿಂದ ಮಾಹಿತಿ ಪಡೆದ ಸಚಿವರು, ಮಳೆ ಅಭಾವದಿಂದ ಸಂಕಷ್ಟಕ್ಕೊಳಗಾದ ನೊಂದ ರೈತರಿಗೆ ಸರ್ಕಾರದಿಂದ ಸೂಕ್ತ ಆರ್ಥಿಕ ನೆರವು ಕೊಡಿಸುವ ಭರವಸೆ ನೀಡಿದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/08/2026 07:51 pm

Cinque Terre

18.19 K

Cinque Terre

0

ಸಂಬಂಧಿತ ಸುದ್ದಿ