ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಅಯೋಧ್ಯೆ ಕಾಣಿಕೆ ಪ್ರಕರಣ: ತಪ್ಪಿತಸ್ಥರಿಗೆ ಜೈಲು ಶಿಕ್ಷೆಯಾಗಲಿ: ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್

ಮಂಗಳೂರು: ಅಯೋಧ್ಯೆ ರಾಮಮಂದಿರದ ಕಾಣಿಕೆ ಪ್ರಕರಣದಲ್ಲಿ ಅಕ್ರಮ ನಡೆದಿರುವುದು ನಿಜ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಫಾಸ್ಟ್‌ ಟ್ರ್ಯಾಕ್‌ ನ್ಯಾಯಾಲಯದ ಮೂಲಕ ಜೈಲು ಶಿಕ್ಷೆಯಾಗಬೇಕು ಎಂದು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಆಗ್ರಹಿಸಿದರು.

ಮಂಗಳೂರಿನ ಕದ್ರಿಯ ವಿಶ್ವಶ್ರೀಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಕುರಿತು ಟ್ರಸ್ಟ್‌ ಯಾವುದೇ ವಿಚಾರವನ್ನು ಮುಚ್ಚಿಹಾಕಿಲ್ಲ. ಅಕ್ರಮದ ಪ್ರಾಥಮಿಕ ಮಾಹಿತಿ ದೊರೆತ ತಕ್ಷಣ ಟ್ರಸ್ಟ್‌ ಸ್ವಯಂಪ್ರೇರಿತವಾಗಿ ಎಫ್‌ಐಆರ್‌ ದಾಖಲಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಮನವಿ ಮಾಡಿದೆ ಎಂದು ಹೇಳಿದರು.

ಟ್ರಸ್ಟ್‌ನ ಜಂಟಿ ಕಾರ್ಯದರ್ಶಿಯವರೂ ಕೂಡ ತನಿಖೆಗೆ ಸಹಕರಿಸಲು ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ. ಸುಪ್ರೀಂ ಕೋರ್ಟ್‌ ಉಸ್ತುವಾರಿಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದ್ದು, 2026ರ ಅಂತ್ಯದೊಳಗೆ ಫಾಸ್ಟ್‌ ಟ್ರ್ಯಾಕ್‌ ನ್ಯಾಯಾಲಯದ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂಬುದು ನಮ್ಮ ಆಗ್ರಹ ಎಂದು ತಿಳಿಸಿದರು.

ಈ ವೇಳೆ ದೆಹಲಿಯಲ್ಲಿ ನಡೆದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ಪಪ್ಪು ಯಾದವ್‌ ಸೇರಿದಂತೆ ಕೆಲವು ವಿಪಕ್ಷ ನಾಯಕರು ಸಾಧುಗಳ ವೇಷ ಧರಿಸಿ ನಡೆಸಿದ ಪ್ರತಿಭಟನೆಯನ್ನು ಖಂಡಿಸಿದರು. ಅಯೋಧ್ಯೆ ಪ್ರಕರಣದಲ್ಲಿ ಯಾವುದೇ ಸಾಧು ಅಥವಾ ಸಂತರ ಹೆಸರು ಕೇಳಿಬಂದಿಲ್ಲ. ಆದರೂ ಕೇಸರಿ ವಸ್ತ್ರಗಳಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು.

ಇದೇ ವೇಳೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಹಿಂದೆ ಎಡಪಂಥೀಯ ಸಂಘಟನೆಗಳ ಕೈವಾಡವಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸ್‌ ಎಐ ಕ್ಯಾಮೆರಾಗಳ ಮಾಹಿತಿ ಆಧರಿಸಿ ಆರೋಪಿಸಿದರು. ಅಲ್ಲದೆ, ಪ್ರತಿಭಟನೆಯಲ್ಲಿ ಬಳಸಲಾದ ಕೆಲವು ಬ್ಯಾನರ್‌ಗಳಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಭಾಷೆ ಬಳಸಲಾಗಿದೆ ಎಂದು ಹೇಳಿದರು.

Edited By :
PublicNext

PublicNext

06/08/2026 07:55 pm

Cinque Terre

4.6 K

Cinque Terre

0

ಸಂಬಂಧಿತ ಸುದ್ದಿ