ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 'ವಿಶ್ವಗುರು ಬಳಿಗೆ ಹೋಗಿ ಹಣ ತರಲಿ'; ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ ಲಾಡ್ ವಾಗ್ದಾಳಿ

ಹುಬ್ಬಳ್ಳಿ: ರೈತರ ವಿಚಾರದಲ್ಲಿ ಬಿಜೆಪಿಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಅವರು ವಿಶ್ವಗುರು ಬಳಿಗೆ ಹೋಗಿ ರಾಜ್ಯಕ್ಕೆ ಹಣ ತರಲಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ ತಾಲ್ಲೂಕಿನಲ್ಲಿ ಬೆಳೆಹಾನಿ ಪರಿಶೀಲನೆ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷಗಳ ಆಡಳಿತದಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಆರೋಪಿಸಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಸುಮಾರು ₹70 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವೂ ರೈತರ ಸಾಲ ಮನ್ನಾ ಮಾಡಿದೆ ಎಂದು ಹೇಳಿದರು.

ಬೆಳೆ ವಿಮೆ ಕಂಪನಿಗಳು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವುಗಳ ಕಾರ್ಯವೈಖರಿ ಕುರಿತು ಸಂಸತ್ತಿನಲ್ಲಿ ಸಮರ್ಪಕ ಚರ್ಚೆ ನಡೆಯುತ್ತಿಲ್ಲ. ಈ ಬಗ್ಗೆ ಪ್ರಶ್ನೆ ಕೇಳಿದರೆ ಬೇರೆ ವಿಷಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/08/2026 08:05 pm

Cinque Terre

15.64 K

Cinque Terre

9

ಸಂಬಂಧಿತ ಸುದ್ದಿ