ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ರಾಹುಲ್ ಗಾಂಧಿ ವರ್ತನೆ ಪ್ರಜಾಪ್ರಭುತ್ವಕ್ಕೆ ಕಳಂಕ - ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕೆ

ಉಡುಪಿ : ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಯತ್ನಿಸುವ ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸುವಂತಹ ಅವರ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಪಮಾನವಾಗುವಂತೆ ಕೆಲಸ ಮಾಡುತ್ತಿದ್ದಾರೆ. ಯಾವ ಸ್ಥಳದಲ್ಲಿ ಯಾವ ರೀತಿಯಲ್ಲಿ ವರ್ತಿಸಬೇಕು, ಹೇಗೆ ಮಾತನಾಡಬೇಕು ಎನ್ನುವ ಪ್ರೌಢಿಮೆ ಅವರಿಗೆ ಇನ್ನೂ ಬಂದಿಲ್ಲ," ಎಂದು ಹೇಳಿದರು.

ವಿರೋಧ ಪಕ್ಷದ ನಾಯಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದ್ದು, ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ತಮ್ಮ ನಿಲುವು ಮತ್ತು ಭಾಷಣಗಳಲ್ಲಿ ಸಂಯಮ ಪಾಲಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

Edited By : Somashekar
PublicNext

PublicNext

06/08/2026 08:07 pm

Cinque Terre

6.55 K

Cinque Terre

0