ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೆನ್-ಪೇಪರ್‌ಗೆ ಗುಡ್‌ಬೈ.? ಕಂಪ್ಯೂಟರ್ ಆಧಾರಿತ 'ನೀಟ್' ಪರೀಕ್ಷೆ: ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್!

ನವದೆಹಲಿ: ರಾಷ್ಟ್ರೀಯ ಅರ್ಹತಾ-ಕಮ್-ಪ್ರವೇಶ ಪರೀಕ್ಷೆ (NEET-UG)ಯನ್ನು ಸಾಂಪ್ರದಾಯಿಕ ಪೆನ್-ಅಂಡ್-ಪೇಪರ್ ಮಾದರಿಯಿಂದ ಕಂಪ್ಯೂಟರ್ ಆಧಾರಿತ (CBT) ಪರೀಕ್ಷೆಯಾಗಿ ಪರಿವರ್ತಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಅರ್ಜಿದಾರರಿಂದ ಪ್ರತಿಕ್ರಿಯೆ ಕೋರಿದೆ.

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠ, ಕೇಂದ್ರ ಸರ್ಕಾರದ ಅಫಿಡವಿಟ್‌ಗೆ ವೈದ್ಯರ ಸಂಘ ಸೇರಿದಂತೆ ಅರ್ಜಿದಾರರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 19ಕ್ಕೆ ನಿಗದಿಪಡಿಸಿದೆ.

ಕೇಂದ್ರ ಸರ್ಕಾರವು, ನೀಟ್-ಯುಜಿಯನ್ನು ಕಂಪ್ಯೂಟರ್ ಆಧಾರಿತ ಮಾದರಿಯಲ್ಲಿ ಒಂದೇ ಹಂತದಲ್ಲಿ ಅಥವಾ ಜೆಇಇ (ಮುಖ್ಯ ಮತ್ತು ಅಡ್ವಾನ್ಸ್) ಮಾದರಿಯಂತೆ ಎರಡು ಹಂತಗಳಲ್ಲಿ ನಡೆಸುವ ಸಾಧ್ಯತೆಯನ್ನು ಸಕ್ರಿಯವಾಗಿ ಪರಿಶೀಲಿಸಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಹೇಳಿದೆ.

ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (FIMA) ಪರ ವಕೀಲ ತನ್ವಿ ದುಬೆ ವಾದ ಮಂಡಿಸಿ, ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಮಾದರಿಗೆ ಬದಲಾಯಿಸುವ ನಿರ್ಧಾರ ಕೈಗೊಳ್ಳುವುದಾದರೆ, ವಿದ್ಯಾರ್ಥಿಗಳು ಹೊಸ ಮಾದರಿಗೆ ಸಿದ್ಧರಾಗಲು ಸಾಕಷ್ಟು ಸಮಯ ಸಿಗುವಂತೆ ಮುಂಚಿತವಾಗಿಯೇ ಪ್ರಕಟಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿ, ತಮ್ಮ ಉತ್ತರ ಮತ್ತು ಸಲಹೆಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ.

Edited By :
PublicNext

PublicNext

06/08/2026 08:46 pm

Cinque Terre

9.82 K

Cinque Terre

1

ಸಂಬಂಧಿತ ಸುದ್ದಿ