ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸರ್ಕಾರದ ಹಸ್ತಕ್ಷೇಪದಿಂದ ದೇವಾಲಯಗಳ ಮುಕ್ತಿಗೆ ರಾಷ್ಟ್ರವ್ಯಾಪಿ ಬೃಹತ್ ಆಂದೋಲನ- ವಿಎಚ್‌ಪಿ ಅಂತರರಾಷ್ಟ್ರೀಯ ಅಧ್ಯಕ್ಷ

ಮಂಗಳೂರು: ದೇಶದ ವಿವಿಧ ರಾಜ್ಯ ಸರ್ಕಾರಗಳ ಮುಷ್ಟಿಯಲ್ಲಿರುವ ಹಿಂದೂ ದೇವಾಲಯಗಳನ್ನು ಸರ್ಕಾರದ ಹಸ್ತಕ್ಷೇಪದಿಂದ ಮುಕ್ತಿಗೊಳಿಸಿ, ಭಕ್ತರಿಗೆ ಹಾಗೂ ಹಿಂದೂ ಸಮಾಜಕ್ಕೆ ಮರಳಿ ವಹಿಸಿಕೊಡಲು ಬೃಹತ್ ರಾಷ್ಟ್ರವ್ಯಾಪಿ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಜಿ. ಘೋಷಿಸಿದ್ದಾರೆ.

ಮಂಗಳೂರಿನ ಕದ್ರಿ ವಿಶ್ವಶ್ರೀ ಸಭಾಂಗಣದಲ್ಲಿ ಮಾತನಾಡಿದ ಅವರು, ದೇವಾಲಯಗಳ ಕಾಣಿಕೆ ಕಳವು ತಡೆಯಲು ಆಡಳಿತದಲ್ಲಿ ಅನುಭವವಿರುವ ಓರ್ವ ಸಿಇಒ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. ಈ ವಿಷಯವನ್ನು ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಗಂಭೀರವಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.

ದೇವಾಲಯಗಳ ಮುಕ್ತಿ ಆಂದೋಲನವನ್ನು ತೀವ್ರಗೊಳಿಸಲು 2026ರಲ್ಲಿ ಬೃಹತ್ ಯೋಜನೆ ರೂಪಿಸಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು, ಸಂಸದರು ಹಾಗೂ ಶಾಸಕರನ್ನು ಖುದ್ದಾಗಿ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ಬೃಹತ್ ಮಹಾನಗರಗಳಲ್ಲಿ ಹಿರಿಯ ನಾಗರಿಕರು ಹಾಗೂ ಗಣ್ಯರನ್ನು ಒಳಗೊಂಡ ಸಮಾವೇಶಗಳನ್ನು ನಡೆಸಿ, ಸಾರ್ವಜನಿಕ ಬೆಂಬಲ ಕ್ರೋಡೀಕರಿಸಲಾಗುವುದು ಎಂದು ತಿಳಿಸಿದರು.

Edited By : Somashekar
PublicNext

PublicNext

06/08/2026 08:52 pm

Cinque Terre

3.88 K

Cinque Terre

0