ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ:ಬೆಳೆಹಾನಿ ಪರಿಶೀಲನೆಗೆ ಬಂದ ಸಚಿವ ಸಂತೋಷ ಲಾಡ್‌ಗೆ ಅದ್ಧೂರಿ ಸ್ವಾಗತ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹುಬ್ಬಳ್ಳಿ ತಾಲೂಕಿನ ಬೆಳೆಹಾನಿ ಪ್ರದೇಶಗಳ ಪರಿಶೀಲನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.

ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್‌ ಬಳಿ ಸಚಿವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ ವೇಳೆ ರೈತ ಮುಖಂಡರು, ಬೆಳೆಹಾನಿಯ ಕುರಿತು ಸರ್ಕಾರಕ್ಕೆ ಸಮಗ್ರ ಹಾಗೂ ವಾಸ್ತವಿಕ ವರದಿ ಸಲ್ಲಿಸಿ, ರೈತರಿಗೆ ಸೂಕ್ತ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಚಿವ ಸಂತೋಷ ಲಾಡ್ ಅವರು ಬಳಿಕ ಬೆಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

Edited By : Somashekar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/08/2026 09:10 pm

Cinque Terre

5.7 K

Cinque Terre

0

ಸಂಬಂಧಿತ ಸುದ್ದಿ