ಹಾವೇರಿ : ಜಿಲ್ಲೆಯ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮುರುಘರಾಜೇಂದ್ರ ಮಠದಿಂದ ಪ್ರಾರಂಭವಾದ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸಿ.ಎಂ, ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪರ ಅಭಿಮಾನಿಗಳು ಘೋಷಣೆ ಕೂಗಿದರು. ಬಸವರಾಜ ಶಿವಣ್ಣನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯ ಮಾಡಿದರು.
ನೂರಾರು ಅಭಿಮಾನಿಗಳು ಶಿವಣ್ಣನವರ ಭಾವಚಿತ್ರ ಹಿಡಿದು ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು. ಪ್ರತಿಭಟನೆ ವೇಳೆ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಅಭಿಮಾನಿಯೊಬ್ಬ ಪೆಟ್ರೋಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.
PublicNext
06/08/2026 09:41 pm
LOADING...