ನವದೆಹಲಿ: ದೆಹಲಿಯಲ್ಲಿ ಗುರುವಾರ ಸುರಿದ ಭಾರೀ ಮಳೆಯ ನಡುವೆಯೂ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಛತ್ರಿ ಬಳಸಲು ನಿರಾಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಗಸ್ಟ್ 6ರಂದು ಸಂಸತ್ ಭವನದ ಹೊರಭಾಗದಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪರಸ್ಪರ ಮಾತುಕತೆ ನಡೆಸಿದರು. ಈ ವೇಳೆ ಮಳೆ ಸುರಿಯುತ್ತಿದ್ದರೂ, ರಾಹುಲ್ ಗಾಂಧಿ ಛತ್ರಿ ಹಿಡಿಯದೆ ಸಂಸತ್ ಆವರಣದಲ್ಲಿ ಸಂಚರಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಕಾಂಗ್ರೆಸ್‌ನ ಅಧಿಕೃತ ಭಾರತ್ ಜೋಡೋ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.
PublicNext
06/08/2026 10:10 pm
LOADING...