ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ತಿಳಿಸಿದ್ದಾರೆ.
ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ಈ ಮೊದಲು ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನಾಂಕವಾಗಿತ್ತು. ಸಾರ್ವಜನಿಕರು ಹಾಗೂ ಉದ್ಯೋಗಾಕಾಂಕ್ಷಿಗಳ ಕೋರಿಕೆಯ ಮೇರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
PublicNext
06/08/2026 10:20 pm
LOADING...