ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR-2026) ಹಿನ್ನೆಲೆಯಲ್ಲಿ ಭರ್ತಿ ಮಾಡಿರುವ ಗಣತಿ ನಮೂನೆಗಳನ್ನು ಆಗಸ್ಟ್ 8ರೊಳಗೆ ಸಲ್ಲಿಸಲು ಅವಕಾಶವಿದ್ದು, ಬಾಕಿ ಇರುವ ನಮೂನೆಗಳನ್ನು ನಾಳೆಯೊಳಗೆ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ ಮಾಡಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೂತ್ ಮಟ್ಟದ ಅಧಿಕಾರಿಗಳು ಜೂನ್ 30, 2026ರಿಂದ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಸಾರ್ವಜನಿಕರು ಭರ್ತಿ ಮಾಡಿದ ನಮೂನೆಗಳನ್ನು ಶೀಘ್ರವಾಗಿ ಸಲ್ಲಿಸಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಕಾರ್ಯ ಪ್ರಗತಿಯಲ್ಲಿದ್ದು, ಎಲ್ಲಾ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ವಿಶೇಷ ಆಯುಕ್ತೆ ಸುಷಮಾ ಗೋಡಬೋಲೆ, ನಗರ ಪಾಲಿಕೆ ಆಯುಕ್ತ ಜಿ. ಪೊಮ್ಮಲ್ ಸುನೀಲ್ ಕುಮಾರ್, ಕೆ.ಎನ್. ರಮೇಶ್, ಜಗದೀಶ್, ಚುನಾವಣಾ ವಿಭಾಗದ ಅಧಿಕಾರಿಗಳು, ಎಡಿಸಿ ಬೆಂಗಳೂರು ಜಗದೀಶ್ ನಾಯ್ಕ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
06/08/2026 10:26 pm
LOADING...