ಹಾವೇರಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಾಳೆಯಿಂದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸುವುದಾಗಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ನಿರ್ವಹಣೆ ಕುರಿತು ಅಧಿಕಾರಿಗಳ ಸಭೆ ಕರೆದಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಬರ ನಿರ್ವಹಣೆಗೆ ರಾಜ್ಯ ಸರ್ಕಾರ ₹1 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಸದ್ಯ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರು ಹಾಗೂ ಮೇವಿನ ಕೊರತೆಯ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದರು.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಹೇಳಿದರು.
PublicNext
06/08/2026 10:45 pm
LOADING...