ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೇಕಾರರ ಬೆವರಿನ ಬೆಲೆಗೆ ಗೌರವ ನೀಡಿ - ಕೈಮಗ್ಗ ವೈವಿಧ್ಯತೆಯನ್ನು ಜನಪ್ರಿಯಗೊಳಿ - ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ, ಭಾರತದ ವೈವಿಧ್ಯಮಯ ಕೈಮಗ್ಗ ಉತ್ಪನ್ನಗಳನ್ನು ಜನಪ್ರಿಯಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಆಗಸ್ಟ್ 7, ದೇಶಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತಿದೆ. ಭಾರತದ ಸಮೃದ್ಧ ಕೈಮಗ್ಗ ಪರಂಪರೆ, ನೇಕಾರರ ಶ್ರಮ ಹಾಗೂ ದೇಶೀಯ ಕೈಮಗ್ಗ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ.

ತಮ್ಮ ನೆಚ್ಚಿನ ಕೈಮಗ್ಗ ಸೀರೆ, ಉಡುಪು ಅಥವಾ ಇತರೆ ಕೈಮಗ್ಗ ಉತ್ಪನ್ನಗಳೊಂದಿಗೆ ಫೋಟೋ ಅಥವಾ GRWM (Get Ready With Me) ಸೇರಿದಂತೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಈ ಅಭಿಯಾನದ ಮೂಲಕ ಸ್ಥಳೀಯ ನೇಕಾರರಿಗೆ ಬೆಂಬಲ ನೀಡುವುದರ ಜೊತೆಗೆ, ಭಾರತದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಮತ್ತಷ್ಟು ಜನರಿಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ರಾಷ್ಟ್ರೀಯ ಕೈಮಗ್ಗ ದಿನದಂದು ಸ್ವದೇಶಿ ಕೈಮಗ್ಗವನ್ನು ಪ್ರೋತ್ಸಾಹಿಸಿ, ದೇಶದ ನೇಕಾರರ ಪರಿಶ್ರಮಕ್ಕೆ ಗೌರವ ಸಲ್ಲಿಸೋಣ ಎಂದು ಕರೆ ನೀಡಿದ್ದಾರೆ.

Edited By :
PublicNext

PublicNext

06/08/2026 10:47 pm

Cinque Terre

3.1 K

Cinque Terre

0

ಸಂಬಂಧಿತ ಸುದ್ದಿ