ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಆಂತರಿಕ ಸಮಸ್ಯೆ ಇಲ್ಲ. ಸಚಿವ ಸ್ಥಾನ ಪಡೆಯುವ ಆಸೆ ಎಲ್ಲರಿಗೂ ಇರುವುದು ಸಹಜ. ನಮ್ಮ ಪಕ್ಷದಲ್ಲಿರುವ ಎಲ್ಲ ಶಾಸಕರೂ ಸಚಿವರಾಗಲು ಅರ್ಹರು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಗುರುವಾರ ಲಾಲ್‌ಬಾಗ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ಮನೆಗಳಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಆಂತರಿಕ ಸಮಸ್ಯೆಗಳಿವೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
"ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಮಾಧ್ಯಮಗಳಲ್ಲಿ. ನಮ್ಮ ಹಿರಿಯ ನಾಯಕರ ಭಾವನೆಗಳಿಗೆ ನಾವು ಗೌರವ ಕೊಡಬೇಕು. ನಮ್ಮ ಪಕ್ಷದಲ್ಲಿ 140 ಶಾಸಕರು ಹಾಗೂ 40 ವಿಧಾನ ಪರಿಷತ್ ಸದಸ್ಯರಿದ್ದಾರೆ. ಆದರೆ ಸಂವಿಧಾನದ ನಿಯಮಗಳ ಪ್ರಕಾರ ಕೇವಲ 33 ಮಂದಿಗೆ ಮಾತ್ರ ಸಚಿವ ಸ್ಥಾನ ನೀಡಲು ಸಾಧ್ಯ" ಎಂದು ಹೇಳಿದರು.
"ನಮ್ಮ ಪಕ್ಷದಲ್ಲಿರುವ ಎಲ್ಲರೂ ಸಚಿವ ಸ್ಥಾನಕ್ಕೆ ಅರ್ಹರು. ಅವರ ಆಸೆಯನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಟ್ಟಾಗಿ ದುಡಿದಿದ್ದಾರೆ. ಮುಂದೆಯೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ" ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
PublicNext
06/08/2026 10:54 pm
LOADING...