ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿಯ 3 ಹೊಸ ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : "ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿಯ 3 ಉದ್ಯಾನಗಳನ್ನು ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ 'ಗಂಗ ಸಾಮ್ರಾಜ್ಯದ ವೈಭವ' ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

"ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆಯ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆಯ ವಶದಲ್ಲೇ ಇರುತ್ತದೆ. ಆದರೆ ಅಲ್ಲಿ ಇಂತಹ ಉದ್ಯಾನ ನಿರ್ಮಿಸಲು ಅನುಮತಿ ಬೇಕು ಎಂದು ಪತ್ರ ಬರೆದಿದ್ದು, ಶೀಘ್ರದಲ್ಲೇ ರಕ್ಷಣಾ ಸಚಿವರನ್ನು ಭೇಟಿ ಮಾಡುತ್ತೇನೆ. ವಾರಣಾಸಿಯಲ್ಲಿ ರಕ್ಷಣಾ ಇಲಾಖೆಯ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಜಿಬಿಎ, ಬಿಡಿಎ, ತೋಟಗಾರಿಕೆ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಗೆ ಜವಾಬ್ದಾರಿ ವಹಿಸಿ ನಿರ್ಮಿಸಲು ಆಲೋಚಿಸಿದ್ದೇವೆ," ಎಂದಿದ್ದಾರೆ.

Edited By : Somashekar
PublicNext

PublicNext

06/08/2026 11:01 pm

Cinque Terre

1.7 K

Cinque Terre

0