ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 220ನೇ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ‘ಗಂಗ ಸಾಮ್ರಾಜ್ಯದ ವೈಭವ’ ವೀಕ್ಷಿಸಲು ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: ಲಾಲ್‌ಬಾಗ್ ಕೇವಲ ಉದ್ಯಾನವನವಲ್ಲ, ಅದು ಇತಿಹಾಸದ ಪ್ರತೀಕ. ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಗಂಗ ಸಾಮ್ರಾಜ್ಯದ ವೈಭವ, ಕೃಷಿಕರ ಬದುಕು ಹಾಗೂ ಅವರ ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ ‘ಗಂಗ ಸಾಮ್ರಾಜ್ಯದ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಿರುವ 220ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಗಂಗರ ಕಾಲದಲ್ಲಿ ನಿರ್ಮಿಸಲಾದ ಕೆರೆಗಳು ಇಂದಿಗೂ ಜನರಿಗೆ ಉಪಯೋಗವಾಗುತ್ತಿವೆ. ಅವರ ಇತಿಹಾಸವು ಸಮಾನತೆ, ಕೃಷಿ ಹಾಗೂ ರೈತರ ಬದುಕಿನೊಂದಿಗೆ ಬೆಸೆದುಕೊಂಡಿದೆ. ಇದೇ ಪರಿಕಲ್ಪನೆಯನ್ನು ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಅನಾವರಣಗೊಳಿಸಲಾಗಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿರುವ ಈ ಫಲಪುಷ್ಪ ಪ್ರದರ್ಶನವನ್ನು ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಬೇಕು. ಯುವಕರು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲರೂ ಕುಟುಂಬ ಸಮೇತರಾಗಿ ಲಾಲ್‌ಬಾಗ್‌ಗೆ ಭೇಟಿ ನೀಡಿ ಪ್ರದರ್ಶನವನ್ನು ಕಣ್ತುಂಬಿಕೊಳ್ಳುವಂತೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

Edited By : Somashekar
PublicNext

PublicNext

06/08/2026 11:11 pm

Cinque Terre

1.53 K

Cinque Terre

0