ಬಾಗಲಕೋಟೆ: ಕೈಮಗ್ಗ ಕ್ಷೇತ್ರವು ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ಸ್ವದೇಶಿ ಉತ್ಪನ್ನಗಳ ಬಳಕೆಗೆ ಉತ್ತೇಜನ ನೀಡುವ ಮೂಲಕ ಸ್ಥಳೀಯ ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸಬೇಕು ಎಂದು ಒಕ್ಕೂಟದ ಅಧ್ಯಕ್ಷೆ ಮಂಜುಳಾ ಹಳ್ಳಿ ಹೇಳಿದರು.
ತಾಲೂಕಿನ ಮಹಾಲಿಂಗಾಪುರ ‘ಎ’ ವಲಯದ ಜವಳಿ ಬಜಾರ್ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀಲಕಂಠೀಶ್ವರ ಮಠದಲ್ಲಿ ಆ.7ರಂದು ಆಯೋಜಿಸಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಒಕ್ಕೂಟ ಸಭೆಯಲ್ಲಿ ಅವರು ಮಾತನಾಡಿದರು.
2015 ರಿಂದ ಪ್ರತಿವರ್ಷ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತಿದ್ದು, ಕೈಮಗ್ಗ ಕ್ಷೇತ್ರದ ಮಹತ್ವ, ಮಹಿಳೆಯರಿಗೆ ಉದ್ಯೋಗ ಸೃಷ್ಟಿ ಹಾಗೂ ದೇಶದ ಜಿಡಿಪಿಗೆ ಕೈಮಗ್ಗ ಮತ್ತು ವಿದೇಶಿ ರಫ್ತು ಆದಾಯದ ಕೊಡುಗೆ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು. ಸ್ವದೇಶಿ ಚಳವಳಿಯ ಆಶಯಗಳನ್ನು ಜನರಿಗೆ ತಲುಪಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೀಡಲಾಗುತ್ತಿರುವ ಅನುದಾನ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ‘ನಮ್ಮ ಊರು–ನಮ್ಮ ಕೆರೆ’, ನಿರ್ಗತಿಕರಿಗೆ ಮಾಶಾಸನ, ವಾತ್ಸಲ್ಯ ಕಾರ್ಯಕ್ರಮ, ಸುಜ್ಞಾನ ನಿಧಿ ಶಿಷ್ಯವೇತನ ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಾಯಿತು. ಅಲ್ಲದೆ PRK ಇನ್ಸೂರೆನ್ಸ್ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆಯೂ ಜಾಗೃತಿ ಮೂಡಿಸಲಾಯಿತು.
PublicNext
10/08/2026 04:24 pm
LOADING...