ಧಾರವಾಡ : ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಸೂಕ್ತ ಮೂಲಸೌಕರ್ಯ ಹಾಗೂ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಸೋಮವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಧಾರವಾಡದ ಸಪ್ತಾಪುರ ಬಳಿಯ ಎಸ್‌ಸಿ-ಎಸ್‌ಟಿ ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ಉಂಟಾಗಿದೆ. ಶೌಚಾಲಯಗಳ ನಿರ್ವಹಣೆ ಸಮರ್ಪಕವಾಗಿಲ್ಲದೆ ಗಬ್ಬು ವಾಸನೆ ಹರಡುತ್ತಿದೆ. ಶುದ್ಧ ಕುಡಿಯುವ ನೀರು ಹಾಗೂ ಗುಣಮಟ್ಟದ ಆಹಾರ ನೀಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಅಗತ್ಯ ಹಾಸಿಗೆಗಳನ್ನೂ ಒದಗಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇನ್ನೂ ಕಾಲೇಜು ಆರಂಭವಾಗಿ ತಿಂಗಳು ಕಳೆದರೂ ಹಾಸ್ಟೆಲ್ ಸಿಗದೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸದ ಕಾರಣ ಅನೇಕರು ತೊಂದರೆ ಅನುಭವಿಸುತ್ತಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರೆಯದಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವುದರ ಜೊತೆಗೆ, ವಸತಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/08/2026 04:39 pm
LOADING...